ಎಸ್ಎಸ್ಎಲ್​ಸಿ ಪರೀಕ್ಷೆಯ ಮೊದಲ ದಿನವೇ ಮೂವರು ವಿದ್ಯಾರ್ಥಿಗಳ ಸಾವುಎಸ್ಎಸ್ಎಲ್​ಸಿ ಪರೀಕ್ಷೆಯ ಮೊದಲ ದಿನವೇ ಮೂವರು ವಿದ್ಯಾರ್ಥಿಗಳ ಸಾವು

ಎಸ್ಎಸ್ಎಲ್​ಸಿ ಪರೀಕ್ಷೆಯ ಮೊದಲ ದಿನವೇ ಮೂವರು ವಿದ್ಯಾರ್ಥಿಗಳ ಸಾವು

ಎಸ್ಎಸ್ಎಲ್​ಸಿ ಪರೀಕ್ಷೆಯ ಮೊದಲ ದಿನವೇ ಮೂವರು ವಿದ್ಯಾರ್ಥಿಗಳ ಸಾವು
ಎಸ್ಎಸ್ಎಲ್​ಸಿ ಪರೀಕ್ಷೆಯ ಮೊದಲ ದಿನವೇ ಮೂವರು ವಿದ್ಯಾರ್ಥಿಗಳ ಸಾವು

ಬೆಂಗಳೂರು ಎಸ್ಎಸ್ಎಲ್​ಸಿ ಪರೀಕ್ಷೆ: ರಾಜ್ಯಾದ್ಯಂತ ಮಾರ್ಚ್​ 25 ರ ಸೋಮವಾರದಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ಹತ್ತನೆಯ ತರಗತಿಯ ಮೊದಲ ಪರೀಕ್ಷೆ ದಿನವೇ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಆತಂಕವನ್ನು ಸೃಷ್ಟಿಸಿದೆ.

ದಿನಾಂಕ 25 ಮಾರ್ಚ್ 2024 ರಂದು ಸೋಮವಾರ ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರೆ, ತುಮಕೂರಿನಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಪರೀಕ್ಷೆ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಎಸ್ಎಸ್ಎಲ್​ಸಿ ಪರೀಕ್ಷೆ: ಪರೀಕ್ಷೆಯ ದಿನವೇ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗದಲ್ಲೊಂದು ಹೃದಯ ವಿದ್ರಾಕ ಘಟನೆಯು ನಡೆದಿದ್ದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಯಡೇಹಳ್ಳಿಯ 16 ವಯಸ್ಸಿನ ಪರಶುರಾಮ್ ಬಾಬು ಎಂಬ ವಿದ್ಯಾರ್ಥಿಯು ಪರೀಕ್ಷಾ ದಿನವೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಪರಶುರಾಮ್ ಬಾಬು ಆನಂದಪುರದ KPSC ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ, ಚೆನ್ನಾಗಿಯೇ ಓದುತ್ತಿದ್ದ. ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ. ಆದರೆ ಕೊನೇ ಕ್ಷಣದಲ್ಲಿ ಪರೀಕ್ಷೆಯ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.

ಎಸ್ಎಸ್ಎಲ್​ಸಿ ಪರೀಕ್ಷೆ: ಅಪಘಾತದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಾವು

ಶಿವಮೊಗ್ಗ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ಎಸ್​ಎಸ್​ಎಲ್​​ಸಿ ಪರೀಕ್ಷೆ ಬರೆಯಬೇಕಾಗಿದ್ದ ಜಂಬರಘಟ್ಟದ ನಿವಾಸಿ 14 ವಯಸ್ಸಿನ ಉಮ್ಮೆ ಕೂಲ್ಸುಂ ರಸ್ತೆ ದಾಟುವ ಸಮಯದಲ್ಲಿ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯು ಸ್ಥಳದಲ್ಲಿಯೇ ಸಾವ್ನಪ್ಪಿದ್ದು, ಹೊಳೆ ಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎಸ್ಎಸ್ಎಲ್​ಸಿ ಪರೀಕ್ಷೆ: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವಾಗ ಅಸ್ವಸ್ಥಗೊಂಡ ವಿದ್ಯಾರ್ಥಿ ಸಾವು

ಎಸ್​ಎಸ್​ಎಲ್​ಸಿ ಪರೀಕ್ಷೆಯ ವೇಳೆ ತುರುವೇಕೆರೆ ಪಟ್ಟಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಮಗ ಮೋಹನ್ ಕುಮಾರ್ ಸಿ.ಎಸ್ (16) ಎಂಬ ವಿದ್ಯಾರ್ಥಿಯೊಬ್ಬ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಮೃತ ವಿದ್ಯಾರ್ಥಿಯು ಚಿಕ್ಕನಾಯಕನಹಳ್ಳಿಯ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ನ ಶ್ರೀ ಕಂಚಿರಾಯ ಸನಿವಾಸ ಪ್ರೌಢ ಶಾಲೆಯ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದು ಬಂದಿದೆ.

ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿರುವ ಸರಸ್ವತಿ ಬಾಲಿಕಾ ಪ್ರೌಢ ಶಾಲಾ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯಾದ ಮೋಹನ್ ಕುಮಾರ್ ಸಿ.ಎಸ್. ಸೋಮವಾರ ಬೆಳಗ್ಗೆ ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆಯನ್ನು ಬರೆಯುತ್ತಿದ್ದ ವೇಳೆ ತೀವ್ರವಾಗಿ ಅಸ್ವಸ್ಥಗೊಂಡಿದ್ದಾನೆ.

ಅಸ್ವಸ್ಥಗೊಂಡ ವಿದ್ಯಾರ್ಥಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಕೆಲ ಸಮಯದ ನಂತರ ಮತ್ತೆ ತೀವ್ರ ಅಸ್ಪಸ್ಥಗೊಂಡಿದ್ದರಿಂದ ವೈದ್ಯರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಶಿಕ್ಷಕರಿಗೆ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ವಿದ್ಯಾರ್ಥಿ ಅಸುನೀಗಿದ್ದಾನೆ.

ಅದೇ ಮಧ್ಯಾಹ್ನ ಹುಲ್ಲೇಕೆರೆಯ ಬಸವೇಶ್ವರ ಸಂಯುಕ್ತ ಪದವಿಪೂರ್ವ ಪ್ರೌಢ ಶಾಲಾ ವಿಭಾಗದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಮತ್ತೊರ್ವ ವಿದ್ಯಾರ್ಥಿ ರೋಹಿತ್ ಅಸ್ವಸ್ಥಗೊಂಡಿದ್ದರಿಂದ ದಂಡಿನಶಿವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮತ್ತೆ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿದೆಂದು ಇಲಾಖಾ ಮೂಲಗಳಿಂದ ತಿಳಿದು ಬಂದಿದೆ.

ಒಟ್ಟಾರೆ ಶುಭವಾಗಿ ಆರಂಭವಾಗಿದ್ದ ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆಯು ಆರಂಭಿಕ ವಿಘ್ನಗಳನ್ನು ಎದುರಿಸಿದೆ. ಈಗಾಗಲೇ ರಾಜ್ಯಾದ್ಯಂತ ಬಿಸಿಲಿನ ತಾಪವು ಹೆಚ್ಚಾಗಿದ್ದು, ದೇಹವು ನಿರ್ಜಲೀಕರಣಕ್ಕೆ ಒಳಗಾಗುವ ಸಾಧ್ಯತೆ ಇದ್ದು, ಪರೀಕ್ಷೆ ಬರೆಯುವ ಪ್ರತಿಯೊಬ್ಬ ವಿದ್ಯಾರ್ಥಿಗಳೂ ಪರೀಕ್ಷಾ ಭಯವನ್ನು ಬಿಟ್ಟು ಶಾಂತತೆಯಿಂದ ಹಾಗೂ ಅಗತ್ಯ ಸಿದ್ಧತೆಗಳೊಂದಿಗೆ ಪರೀಕ್ಷೆಯನ್ನು ಎದುರಿಸಬೇಕು.

ಇವುಗಳನ್ನೂ ಓದಿ:

Leave a Reply

Your email address will not be published. Required fields are marked *