Site icon Super News Daily

ಪ್ಯಾರೀಸ್ ಒಲಂಪಿಕ್ಸ್: ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯರಿಂದ 5 ಲಕ್ಷ ರೂ. ಮಂಜೂರು

ಪ್ಯಾರೀಸ್ ಒಲಂಪಿಕ್ಸ್: ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯರಿಂದ 5 ಲಕ್ಷ ರೂ. ಮಂಜೂರು

ಪ್ಯಾರೀಸ್ ಒಲಂಪಿಕ್ಸ್ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯರಿಂದ 5 ಲಕ್ಷ ರೂ. ಮಂಜೂರು

ಬೆಂಗಳೂರು: ಪ್ಯಾರೀಸ್ ಒಲಂಪಿಕ್ಸ್‌ನಲ್ಲಿ ಭಾರತದ ಪ್ರತಿನಿಧಿಸುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿ ನೆರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹದಾಗಿ ತಲಾ 5 ಲಕ್ಷ ರೂಪಾಯಿ ನೀಡುವಂತೆ ಕೇಳಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಹಣವನ್ನು ಮಂಜೂರು ಮಾಡಿದ್ದಾರೆ.

ಜುಲೈ 26ರಿಂದ ಆಗಸ್ಟ್ 11ರವರೆಗೆ ಪ್ಯಾರೀಸ್‌ನಲ್ಲಿ ನಡೆಯಲಿರುವ ಒಲಂಪಿಕ್ ಕ್ರೀಡಾಕೂಟದಲ್ಲಿ ರಾಜ್ಯದ ಹಲವರು ಪಾಲ್ಗೊಳ್ಳಲಿದ್ದಾರೆ. ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್‌ನಲ್ಲಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಪರ್ಧೆಯಲ್ಲಿ ಧಿನಿಧಿ ದೇಸಿಂಗ್, ಮಿಕ್ಸ್ಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್‌ನಲ್ಲಿ ಅರ್ಚನಾ ಕಾಮತ್, ಪುರುಷರ ಈಜು ಸ್ಪರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್‌ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್‌ನಲ್ಲಿ ನಿಶಾಂತ್ ದೇವ್, ಮಿಕ್ಸ್ಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ಒಂಬತ್ತು ಕ್ರೀಡಾಪಟುಗಳಿಗೆ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್‌ನಿಂದ ಪ್ರತ್ಯೇಕವಾಗಿ ಸಹಾಯ ಒದಗಿಸಲಾಗುವುದು ಎಂದು ಡಾ.ಕೆ.ಗೋವಿಂದರಾಜು ತಿಳಿಸಿದ್ದಾರೆ. ಕ್ರೀಡಾಪಟುಗಳಿಗೆ ಸರ್ಕಾರದ ನೆರವು ದೊರಕಿಸಿದ ಮುಖ್ಯಮಂತ್ರಿಗಳಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಇವುಗಳನ್ನೂ ಓದಿ:

Exit mobile version